ದತ್ತನೆಂದರೆ (ನಿರ್ಗುಣದ ಅನುಭೂತಿಯನ್ನು) ಪಡೆದವನು. ‘ನಾನು ಬ್ರಹ್ಮನೇ ಆಗಿದ್ದೇನೆ, ಮುಕ್ತನೇ ಆಗಿದ್ದೇನೆ, ಆತ್ಮನೇ ಆಗಿದ್ದೇನೆ’ ಎಂಬ ನಿರ್ಗುಣದ ಅನುಭೂತಿಯನ್ನು ಯಾರಿಗೆ ಕೊಡಲಾಗಿದೆಯೋ ಅವನೇ ದತ್ತ. ಜನ್ಮದಿಂದಲೇ ದತ್ತನಿಗೆ ನಿರ್ಗುಣದ ಅನುಭೂತಿ ಇತ್ತು, ಸಾಧಕರಿಗೆ ಇಂತಹ ಅನುಭೂತಿ ಬರಲು ಎಷ್ಟೋ ಜನ್ಮಗಳವರೆಗೆ ಸಾಧನೆಯನ್ನು ಮಾಡಬೇಕಾಗುತ್ತದೆ. ಇದರಿಂದ ದತ್ತನ ಮಹತ್ವವು ಗಮನಕ್ಕೆ ಬರುತ್ತದೆ.
ಇತರ ಕೆಲವು ಹೆಸರುಗಳು
ಅವಧೂತ
೧. ‘ಅವಧೂತ ಚಿಂತನ ಶ್ರೀ ಗುರುದೇವ ದತ್ತ|’ ಎಂಬ ಜಯಘೋಷವನ್ನು ದತ್ತಭಕ್ತರು ಮಾಡುತ್ತಾರೆ. ಇದರ ಅರ್ಥವು ಹೀಗಿದೆ - ಅವಧೂತನೆಂದರೆ ಭಕ್ತ. ಭಕ್ತರ ಚಿಂತನೆಯನ್ನು ಮಾಡುವವನು, ಅಂದರೆ ಭಕ್ತರ ಹಿತಚಿಂತಕ, ಶ್ರೀ ಗುರುದೇವ ದತ್ತ.
೨. ಎಲ್ಲ ಸಂಕಲ್ಪ-ವಿಕಲ್ಪರಹಿತದ ವಿಭೂತಿಯನ್ನು ಅವನು ಸಂಪೂರ್ಣ ಶರೀರಕ್ಕೆ ಹಚ್ಚಿಕೊಂಡಿದ್ದನು. ಆದುದರಿಂದಲೇ ಅವನಿಗೆ ‘ಅವಧೂತ’ ಎಂದು ಕರೆಯಲಾಗುತ್ತಿತ್ತು; ಅನ್ಯಥಾ ಅವನು ಬ್ರಾಹ್ಮಣನೇ ಆಗಿದ್ದನು. ಸುತ್ತಲಿನ ಪ್ರಪಂಚವನ್ನು ಅವನು ಆತ್ಮಜ್ಞಾನದಿಂದ ತೊಳೆದಿದ್ದನು; ಆದುದರಿಂದಲೂ ಅವನಿಗೆ ‘ಅವಧೂತ’ ಎನ್ನಬೇಕು. ಅನ್ಯಥಾ ಅವನು ಓರ್ವ ವಿಖ್ಯಾತ ಬ್ರಾಹ್ಮಣನಾಗಿದ್ದನು. ಯಾವನು ‘ಅಹಂ’ ವನ್ನು ತೊಳೆಯುತ್ತಾನೆಯೋ ಅವನೇ ಅವಧೂತ, ಅವನೇ ಯೋಗಿ ಮತ್ತು ಅವನೇ ಪುನೀತನಾಗಿದ್ದಾನೆ. ಯಾವನು ಅಹಂಕಾರಪೀಡಿತನಾಗಿರು ತ್ತಾನೆಯೋ ಅವನೇ ಜನ್ಮಕರ್ಮಗಳಲ್ಲಿ ಪಾಪಿಯಾಗಿರುತ್ತಾನೆ ಎಂದು ತಿಳಿಯಬೇಕು. - ಏಕನಾಥೀ ಭಾಗವತ ಅಧ್ಯಾಯ ೭, ದ್ವಿಪದಿ ೨೭೦-೨೭೨
ದಿಗಂಬರ
‘ದಿಕ್ ಏವ ಅಂಬರಃ|’ ದಿಕ್ ಅಂದರೆ ದಿಕ್ಕುಗಳೇ ಯಾವನ ಅಂಬರವಾಗಿವೆಯೋ, ಅಂದರೆ ವಸ್ತ್ರವಾಗಿವೆಯೋ, ಅವನೇ ದಿಗಂಬರ; ಅಂದರೆ ಅವನು ಇಷ್ಟು ದೊಡ್ಡವನಾಗಿದ್ದಾನೆ, ಸರ್ವವ್ಯಾಪಿಯಾಗಿದ್ದಾನೆ.
ದತ್ತಾತ್ರೇಯ
ಈ ಶಬ್ದವು ದತ್ತ + ಆತ್ರೇಯ ಹೀಗೆ ರೂಪುಗೊಂಡಿದೆ. ದತ್ತನ ಅರ್ಥವನ್ನು ವಿಷಯ ಪ್ರಾರಂಭದಲ್ಲಿ ನೀಡಲಾಗಿದೆ. ಆತ್ರೇಯ ಎಂದರೆ ಅತ್ರಿಋಷಿಗಳ ಮಗ.
ಜನ್ಮದ ಇತಿಹಾಸ
ದತ್ತನ ಜನ್ಮವು ಪ್ರಸ್ತುತ ಮನ್ವಂತರದ ಆರಂಭದಲ್ಲಿ ಪ್ರಥಮ ಪರ್ಯಾಯದಲ್ಲಿನ ತ್ರೇತಾಯುಗದಲ್ಲಿ ಆಗಿದೆ, ಎಂಬ ವರ್ಣನೆಯು ಪುರಾಣಗಳಲ್ಲಿ ಸಿಗುತ್ತದೆ.
ಪುರಾಣಗಳಿಗನುಸಾರ
ಅತ್ರಿಋಷಿಗಳ ಪತ್ನಿ ಅನಸೂಯಾಳು ಮಹಾಪತಿವ್ರತೆಯಾಗಿದ್ದಳು. ಅವಳ ಪಾತಿವ್ರತ್ಯದ ಪರೀಕ್ಷೆ ತೆಗೆದುಕೊಳ್ಳಲು ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರರು ನಿರ್ಧರಿಸಿದರು. ಒಮ್ಮೆ ಅತ್ರಿಋಷಿಗಳು ಅನುಷ್ಠಾನಕ್ಕಾಗಿ ಹೊರಗೆ ಹೋದಾಗ ತ್ರಿಮೂರ್ತಿಗಳು (ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರರು) ಅತಿಥಿಗಳ ವೇಷದಲ್ಲಿ ಬಂದರು ಮತ್ತು ಅನಸೂಯಾಳ ಬಳಿ ಭೋಜನವನ್ನು ಬೇಡಿದರು. ಅದಕ್ಕೆ ಅನಸೂಯಾಳು, ‘ಋಷಿಗಳು ಅನುಷ್ಠಾನಕ್ಕಾಗಿ ಹೊರಗೆ ಹೋಗಿದ್ದಾರೆ ಅವರು ಬರುವ ತನಕ ತಡೆಯಿರಿ’ ಎಂದಳು. ಆಗ ತ್ರಿಮೂರ್ತಿಗಳು ಅನಸೂಯಾಳಿಗೆ, ‘ಋಷಿಗಳಿಗೆ ಹಿಂದಿರುಗಲು ತಡವಾಗಬಹುದು; ನಮಗೆ ತುಂಬಾ ಹಸಿವಾಗಿದೆ; ತಕ್ಷಣ ಆಹಾರವನ್ನು ನೀಡು, ಇಲ್ಲವಾದರೆ ನಾವು ಬೇರೆ ಕಡೆ ಹೋಗುತ್ತೇವೆ’. ‘ಆಶ್ರಮಕ್ಕೆ ಬಂದ ಅತಿಥಿಗಳಿಗೆ ನೀವು ಇಚ್ಛಾಭೋಜನವನ್ನು ನೀಡುತ್ತೀರಿ,’ ಎಂದು ನಾವು ಕೇಳಿದ್ದೇವೆ; ಆದುದರಿಂದ ನಾವು ಇಚ್ಛಾಭೋಜನವನ್ನು ಮಾಡಲು ಬಂದಿದ್ದೇವೆ’ ಎಂದು ಹೇಳಿದರು. ನಂತರ ಅನಸೂಯಾಳು ಅವರನ್ನು ಸ್ವಾಗತಿಸಿದಳು ಮತ್ತು ಭೋಜನಕ್ಕೆ ಕುಳಿತುಕೊಳ್ಳಲು ವಿನಂತಿಸಿದಳು. ಅದರಂತೆಯೇ ಅವರು ಭೋಜನಕ್ಕೆ ಕುಳಿತುಕೊಂಡರು. ಅವಳು ಊಟಕ್ಕೆ ಬಡಿಸಲು ಬಂದಾಗ ಅವರು, ‘ನೀನು ವಿವಸ್ತ್ರಳಾಗಿ ನಮಗೆ ಬಡಿಸಬೇಕು ಎಂಬುದು ನಮ್ಮ ಇಚ್ಛೆಯಾಗಿದೆ’ ಎಂದರು. ‘ಅತಿಥಿಗಳನ್ನು ಹಿಂದಿರುಗಿಸಿ ಕಳುಹಿಸುವುದು ಅಯೋಗ್ಯವಾಗುತ್ತದೆ. ನನ್ನ ಮನಸ್ಸು ನಿರ್ಮಲವಾಗಿದೆ. ನನ್ನ ಪತಿಯ ತಪಸ್ಸಿನ ಫಲವು ನನ್ನನ್ನು ಕಾಪಾಡುವುದು,’ ಎಂದು ವಿಚಾರ ಮಾಡಿ ಅವಳು ಅತಿಥಿಗಳಿಗೆ ‘ಸರಿ, ನೀವು ಭೋಜನಕ್ಕೆ ಕುಳಿತುಕೊಳ್ಳಿರಿ’ ಎಂದಳು. ನಂತರ ಅಡುಗೆಮನೆಗೆ ಹೋಗಿ ಪತಿಯ ಸ್ಮರಣೆಯನ್ನು ಮಾಡಿದಳು, ಮನಸ್ಸಿನಲ್ಲಿ ‘ಅತಿಥಿಗಳು ನನ್ನ ಮಕ್ಕಳೇ ಆಗಿದ್ದಾರೆ’ ಎಂಬ ಭಾವವನ್ನಿಟ್ಟುಕೊಂಡಳು. ನಂತರ ನೋಡಿದರೆ ಅಲ್ಲಿ ಅತಿಥಿಗಳ ಜಾಗದಲ್ಲಿ ಅಳುತ್ತಿರುವ ಮೂರು ಮಕ್ಕಳಿದ್ದರು! ಅವರನ್ನು ಮಡಿಲಲ್ಲಿ ತೆಗೆದುಕೊಂಡು ಅವಳು ಸ್ತನಪಾನವನ್ನು ಮಾಡಿಸಿದಳು. ಮಕ್ಕಳು ಅಳುವುದನ್ನು ನಿಲ್ಲಿಸಿದರು.
ಅಷ್ಟರಲ್ಲಿಯೇ ಅತ್ರಿಋಷಿಗಳು ಬಂದರು. ಅವಳು ಅವರಿಗೆ ಎಲ್ಲ ವೃತ್ತಾಂತವನ್ನು ತಿಳಿಸಿದಳು. ಅವಳು, ‘ಸ್ವಾಮಿನ್ ದೇವೇನ ದತ್ತಮ್|’ ಎಂದು ಹೇಳಿದಳು. ಇದರ ಅರ್ಥ - ‘ಹೇ ಸ್ವಾಮಿ, ದೇವರು ನೀಡಿದ (ಮಕ್ಕಳು).’ ಇದರಿಂದ ಅತ್ರಿಯವರು ಆ ಮಕ್ಕಳ ನಾಮಕರಣವನ್ನು ‘ದತ್ತ’ ಎಂದು ಮಾಡಿದರು. ನಂತರ ಅತ್ರಿಋಷಿಗಳು ಅಂತರ್‌ಜ್ಞಾನದಿಂದ ಆ ಮಕ್ಕಳ ನಿಜ ಸ್ವರೂಪವನ್ನು ತಿಳಿದುಕೊಂಡು ಅವರಿಗೆ ನಮಸ್ಕಾರ ಮಾಡಿದರು. ಮಕ್ಕಳು ತೊಟ್ಟಿಲಲ್ಲಿ ಉಳಿದವು ಹಾಗೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರು ಅವರೆದುರು ಪ್ರಕಟರಾದರು ಮತ್ತು ಪ್ರಸನ್ನರಾಗಿ ‘ವರ ಬೇಡಿರಿ’, ಎಂದರು. ಅತ್ರಿ ಮತ್ತು ಅನಸೂಯರು ‘ಬಾಲಕರು ನಮ್ಮ ಮನೆಯಲ್ಲಿಯೇ ಇರಲಿ’, ಎಂಬ ವರವನ್ನು ಕೇಳಿದರು. ಆ ವರವನ್ನು ನೀಡಿ ದೇವರು ತಮ್ಮತಮ್ಮ ಲೋಕಗಳಿಗೆ ತೆರಳಿದರು. ಮುಂದೆ ಬ್ರಹ್ಮದೇವನಿಂದ ಚಂದ್ರ, ಶ್ರೀವಿಷ್ಣುವಿನಿಂದ ದತ್ತ ಮತ್ತು ಶಂಕರನಿಂದ ದೂರ್ವಾಸರಾದರು. ಮೂವರಲ್ಲಿ ಚಂದ್ರ ಮತ್ತು ದೂರ್ವಾಸರು ತಪಸ್ಸಿಗೆ ಹೋಗಲು ಅನುಮತಿಯನ್ನು ಪಡೆದು ಕ್ರಮವಾಗಿ ಚಂದ್ರಲೋಕ ಮತ್ತು ತೀರ್ಥಕ್ಷೇತ್ರಗಳಿಗೆ ಹೋದರು. ಮೂರನೆಯ ದತ್ತನು ವಿಷ್ಣುವಿನ ಕಾರ್ಯಕ್ಕಾಗಿ ಭೂಮಿಯ ಮೇಲೆ ಉಳಿದನು.
ದತ್ತನ ಗುರುಗಳು ಮತ್ತು ಉಪಗುರುಗಳು
ಗುರು: ಶ್ರೀಮದ್ಭಾಗವತದ ಹನ್ನೊಂದನೆಯ ಸ್ಕಂದದಲ್ಲಿ ಯದು ಮತ್ತು ಅವಧೂತರ ಸಂವಾದವಿದೆ. ಇದರಲ್ಲಿ ಅವಧೂತರು ‘ತಾವು ಯಾವ ಗುರುಗಳನ್ನು ಮಾಡಿಕೊಂಡರು ಮತ್ತು ಅವರಿಂದ ಏನು ಕಲಿತರು’, ಎನ್ನುವುದನ್ನು ಹೇಳಿದ್ದಾರೆ. (ಇಲ್ಲಿ ‘ಗುರು’ ಎಂಬ ಶಬ್ದವನ್ನು ಉಪಯೋಗಿಸಿದ್ದರೂ, ಅದನ್ನು ‘ಶಿಕ್ಷಕ’ ಎಂಬ ಅರ್ಥದಲ್ಲಿ ಉಪಯೋಗಿಸಲಾಗಿದೆ. ನಿಜವಾದ ಗುರುಗಳು ಹೇಗಿರುತ್ತಾರೆ ಎನ್ನುವುದನ್ನು ಸನಾತನದ ಗ್ರಂಥ ‘ಗುರುಕೃಪಾಯೋಗ’ದಲ್ಲಿ ಕೊಡಲಾಗಿದೆ.)
ಅವಧೂತ ಹೇಳುತ್ತಾನೆ, ಜಗತ್ತಿನಲ್ಲಿರುವ ಪ್ರತಿಯೊಂದು ವಿಷಯವೂ ಗುರುವಾಗಿದೆ; ಏಕೆಂದರೆ ಪ್ರತಿಯೊಂದು ವಿಷಯದಿಂದಲೂ ಏನಾದರೊಂದು ಕಲಿಯಲು ಸಿಗುತ್ತದೆ. ಕೆಟ್ಟ ವಿಷಯಗಳಿಂದ ಯಾವ ದುರ್ಗುಣಗಳನ್ನು ಬಿಡಬೇಕು ಮತ್ತು ಒಳ್ಳೆಯ ವಿಷಯಗಳಿಂದ ಯಾವ ಸದ್ಗುಣಗಳನ್ನು ತೆಗೆದುಕೊಳ್ಳಬೇಕು ಎಂಬುದು ಕಲಿಯಲು ಸಿಗುತ್ತದೆ. ಉದಾಹರಣೆಗಾಗಿ ನಾನು ಮುಂದೆ ಕೊಟ್ಟಿರುವ ಇಪ್ಪತ್ನಾಲ್ಕು ಗುರುಗಳಿಂದ ಸ್ವಲ್ಪ-ಸ್ವಲ್ಪ ಜ್ಞಾನವನ್ನು ಪಡೆದು ಅವುಗಳಿಂದ ಸಮುದ್ರವನ್ನು ಮಾಡಿದೆ ಮತ್ತು ಅದರಲ್ಲಿ ಸ್ನಾನ ಮಾಡಿ ಎಲ್ಲ ಪಾಪಗಳ ಪರಿಮಾರ್ಜನೆಯನ್ನು ಮಾಡಿಕೊಂಡೆ.
ಶ್ರೀ ದತ್ತಜಯಂತಿ
ಇದು ಒಂದು ಸಾಂಪ್ರದಾಯಿಕ ಜನ್ಮೋತ್ಸವ. ಮಾರ್ಗಶಿರ ಹುಣ್ಣಿಮೆಯಂದು ಮೃಗ ನಕ್ಷತ್ರದಲ್ಲಿ ಸಾಯಂಕಾಲ ದತ್ತನ ಜನ್ಮವಾಯಿತು, ಆದುದರಿಂದ ಆ ದಿನ ದತ್ತನ ಜನ್ಮೋತ್ಸವವನ್ನು ಎಲ್ಲ ದತ್ತಕ್ಷೇತ್ರಗಳಲ್ಲಿ ಆಚರಿಸಲಾಗುತ್ತದೆ.
ದತ್ತಜಯಂತಿಯ ಮಹತ್ವ
ದತ್ತಜಯಂತಿಯಂದು ಪೃಥ್ವಿಯ ಮೇಲೆ ದತ್ತತತ್ತ್ವವು ನಿತ್ಯದ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನ ಮನಃಪೂರ್ವಕ ದತ್ತನ ನಾಮಜಪಾದಿ ಉಪಾಸನೆಯನ್ನು ಮಾಡಿದರೆ ದತ್ತತತ್ತ್ವದ ಆದಷ್ಟು ಹೆಚ್ಚು ಲಾಭವಾಗಲು ಸಹಾಯವಾಗುತ್ತದೆ.
ಜನ್ಮೋತ್ಸವವನ್ನು ಆಚರಿಸುವುದು
ದತ್ತಜಯಂತಿಯನ್ನು ಆಚರಿಸುವ ಸಂಬಂಧದಲ್ಲಿ ಶಾಸ್ತ್ರೋಕ್ತ ವಿಶಿಷ್ಟ ವಿಧಿವಿಧಾನಗಳು ಕಂಡುಬರುವುದಿಲ್ಲ. ಈ ಉತ್ಸವದ ಮೊದಲು ಏಳು ದಿನಗಳ ವರೆಗೆ ಗುರುಚರಿತ್ರೆಯ ಪಾರಾಯಣವನ್ನು ಮಾಡುವ ಪದ್ಧತಿಯಿದೆ. ಇದಕ್ಕೆ ಗುರುಚರಿತ್ರಸಪ್ತಾಹ ಎನ್ನುತ್ತಾರೆ. ಭಜನೆ, ಪೂಜೆ ಮತ್ತು ವಿಶೇಷವಾಗಿ ಕೀರ್ತನೆ ಇತ್ಯಾದಿ ಭಕ್ತಿಯ ವಿಧಗಳು ಪ್ರಚಲಿತವಾಗಿವೆ. ಮಹಾರಾಷ್ಟ್ರದಲ್ಲಿ ಔದುಂಬರ, ನರಸೋಬಾನ ವಾಡಿ, ಗಾಣಗಾಪುರ ಇತ್ಯಾದಿ ದತ್ತಕ್ಷೇತ್ರಗಳಲ್ಲಿ ಈ ಉತ್ಸವಕ್ಕೆ ವಿಶೇಷ ಮಹತ್ವವಿದೆ. ತಮಿಳುನಾಡಿ ನಲ್ಲಿಯೂ ದತ್ತಜಯಂತಿಯ ರೂಢಿಯಿದೆ. ಕೆಲವು ಬ್ರಾಹ್ಮಣ ಕುಟುಂಬದಲ್ಲಿ ಈ ಉತ್ಸವದ ನಿಮಿತ್ತ ದತ್ತನವರಾತ್ರಿಯನ್ನು ಪಾಲಿಸಲಾಗುತ್ತದೆ ಮತ್ತು ಅದು ಮಾರ್ಗಶಿರ ಶುಕ್ಲ ಅಷ್ಟಮಿ ಯಿಂದ ಆರಂಭವಾಗುತ್ತದೆ.
ನಿತ್ಯಕ್ರಮಗಳು
೧.ನಿವಾಸ: ಮೇರುಶಿಖರ
೨.ಪ್ರಾತಃಸ್ನಾನ:ವಾರಾಣಸಿ (ಗಂಗಾತೀರ)
೩.ಆಚಮನ: ಕುರುಕ್ಷೇತ್ರ
೪.ಚಂದನ ಲೇಪವನ್ನು ಹಚ್ಚಿಕೊಳ್ಳುವುದು:ಪ್ರಯಾಗ (ಪಾಠಭೇದ - ತಿಲಕ ಹಚ್ಚಿಕೊಳ್ಳುವುದು : ಪಂಢರಾಪುರ)
೫.ಪ್ರಾತಃಸಂಧ್ಯೆ: ಕೇದಾರ
೬.ವಿಭೂತಿಗ್ರಹಣ: ಕೇದಾರ
೭.ಧ್ಯಾನ: ಗಂಧರ್ವಪತ್ತನ (ಅಪವಾದ - ಯೋಗ: ಗಿರನಾರ, ಸೌರಾಷ್ಟ್ರ, ಗುಜರಾತ.)
೮.ಮಧ್ಯಾಹ್ನದ ಭಿಕ್ಷೆ: ಕೊಲ್ಹಾಪುರ (ಮಹಾರಾಷ್ಟ್ರ)
೯.ಮಧ್ಯಾಹ್ನದ ಭೋಜನ: ಪಾಂಚಾಳೇಶ್ವರ, ಬೀಡ್ ಜಿಲ್ಲೆ, ಮಹಾರಾಷ್ಟ್ರ ಗೋದಾವರಿಯ ತೀರದಲ್ಲಿ.
೧೦.ತಾಂಬೂಲ ಭಕ್ಷಣ: ರಾಕ್ಷಸಭುವನ, ಬೀಡ್ ಜಿಲ್ಲೆ, ಮರಾಠವಾಡಾ.
೧೧.ವಿಶ್ರಾಂತಿ: ರೈವತ ಪರ್ವತ
೧೨.ಸಾಯಂಕಾಲದ ಸಂಧ್ಯೆ: ಪಶ್ಚಿಮ ಸಾಗರ
೧೩.ಪುರಾಣಶ್ರವಣ: ನರನಾರಾಯಣಾಶ್ರಮ (ಅಪವಾದ - ಪ್ರವಚನ ಮತ್ತು ಕೀರ್ತನೆಗಳನ್ನು ಕೇಳುವುದು: ನೈಮಿಷಾರಣ್ಯ, ಬಿಹಾರ್)
೧೪.ನಿದ್ರೆ: ಮಾಹೂರಗಡ (ಪಾಠಭೇದ - ಸಹ್ಯ ಪರ್ವತ, ನಾಂದೇಡ ಜಿಲ್ಲೆ)
ಇವುಗಳ ಪೈಕಿ ೨, ೮ ಮತ್ತು ೧೪ನೆಯ ಸ್ಥಾನಗಳು ಪ್ರಸಿದ್ಧವಾಗಿವೆ.
ಮೃತದೇಹವನ್ನು ಸ್ಮಶಾನಕ್ಕೆ ಒಯ್ಯುವಾಗ ಅಂತ್ಯಯಾತ್ರೆಯಲ್ಲಿ ಪಾಲ್ಗೊಂಡವರು ದೊಡ್ಡ ಸ್ವರದಲ್ಲಿ ‘ಶ್ರೀ ಗುರುದೇವ ದತ್ತ|’ ಎಂಬ ನಾಮಜಪವನ್ನು ಏಕೆ ಮಾಡಬೇಕು?
‘ಪೂರ್ವಜರಿಗೆ ಗತಿ (ಮುಕ್ತಿ) ಕೊಡುವುದು’, ದತ್ತತತ್ತ್ವದ ಕಾರ್ಯವೇ ಆಗಿರುವುದರಿಂದ ದತ್ತನ ನಾಮಜಪದಿಂದ ಕಡಿಮೆ ಕಾಲಾವಧಿಯಲ್ಲಿ ಲಿಂಗದೇಹಕ್ಕೆ, ಹಾಗೆಯೇ ವಾತಾವರಣಕಕ್ಷೆಯಲ್ಲಿ ಸಿಲುಕಿ ಕೊಂಡಿರುವ ಅದರ ಇತರ ಪೂರ್ವಜರಿಗೆ ಗತಿಯು ಸಿಗುತ್ತದೆ.
- ಶ್ರೀ ಗುರುತತ್ತ್ವ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೨೪.೬.೨೦೦೫, ಮಧ್ಯಾಹ್ನ ೩.೫೦)
(ಹೆಚ್ಚಿನ ಮಾಹಿತಿಗಾಗಿ ಓದಿ - ಸನಾತನದ ಗ್ರಂಥ 'ದತ್ತ')
ಶ್ರೀ ಗಣೇಶ : ಚತುರ್ಥಿ ಮಹತ್ವ
‘ಗುರುಕೃಪಾಯೋಗ’ - ಕಲಿಯುಗದಲ್ಲಿ ಶೀಘ್ರ ಆಧ್ಯಾತ್ಮಿಕ ಉನ್ನತಿಯನ್ನು ಸಾಧ್ಯಗೊಳಿಸುವ ಸಾಧನಾಮಾರ್ಗ!
(ಹೆಚ್ಚಿನ ಮಾಹಿತಿಗಾಗಿ ಓದಿ - ಸನಾತನದ ಗ್ರಂಥ 'ದತ್ತ')
ಸಂಬಂಧಿತ ವಿಷಯಗಳು
ಶ್ರೀ ಗುರುದೇವ ದತ್ತ : ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಿಸುವ ದೇವತೆಶ್ರೀ ಗಣೇಶ : ಚತುರ್ಥಿ ಮಹತ್ವ
‘ಗುರುಕೃಪಾಯೋಗ’ - ಕಲಿಯುಗದಲ್ಲಿ ಶೀಘ್ರ ಆಧ್ಯಾತ್ಮಿಕ ಉನ್ನತಿಯನ್ನು ಸಾಧ್ಯಗೊಳಿಸುವ ಸಾಧನಾಮಾರ್ಗ!
Very good information, thanks.
ReplyDelete