ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಏಕೆ ಮಾಡಬೇಕು?


ಪಿತೃಪಕ್ಷದಲ್ಲಿ ವಾತಾವರಣದಲ್ಲಿನ ತಿರ್ಯಕ್ ಲಹರಿಗಳ (ರಜ-ತಮಾತ್ಮಕ ಲಹರಿಗಳ) ಮತ್ತು ಯಮಲಹರಿಗಳ ಪ್ರಭಾವವು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಮಾಡಿದರೆ ರಜ-ತಮಾತ್ಮಕ ಕೋಶಗಳಿರುವ ಪಿತೃಗಳಿಗೆ ಪೃಥ್ವಿಯ ವಾತಾವರಣ ಕಕ್ಷೆಯಲ್ಲಿ ಬರಲು ಸುಲಭವಾಗುತ್ತದೆ. ಆದುದರಿಂದ ಹಿಂದೂ ಧರ್ಮದಲ್ಲಿ ಹೇಳಲಾದ ವಿಧಿಗಳನ್ನು ಆಯಾ ಕಾಲದಲ್ಲಿ ಮಾಡುವುದು ಹೆಚ್ಚು ಶ್ರೇಯಸ್ಕರವಾಗಿದೆ’. - ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ ೧೨.೮.೨೦೦೫, ಸಾಯಂಕಾಲ ೬.೦೨)

ಒಂದು ವರ್ಷದವರೆಗೆ ಶ್ರಾದ್ಧವನ್ನು ಮಾಡಿದ ನಂತರ ಪುನಃ ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಏಕೆ ಮಾಡಬೇಕು?
‘ಮೃತ್ಯುವಿನ ನಂತರ ಒಂದು ವರ್ಷದವರೆಗೆ ಮಾಡುವ ಶ್ರಾದ್ಧದಿಂದ ಆಯಾ ವಿಶಿಷ್ಟ ಲಿಂಗದೇಹಗಳಿಗೆ ಗತಿ ಸಿಗುವುದರಿಂದ ಆಯಾ ವ್ಯಕ್ತಿಗಳ ವ್ಯಷ್ಟಿ ಸ್ತರದಲ್ಲಿನ ಋಣವನ್ನು ತೀರಿಸಲು ಸಹಾಯವಾಗುತ್ತದೆ. ಇದು ವೈಯಕ್ತಿಕ ಸ್ತರದಲ್ಲಿ ಋಣವನ್ನು ತೀರಿಸುವ ಒಂದು ವ್ಯಷ್ಟಿ ಉಪಾಸನೆಯೇ ಆಗಿದೆ ಮತ್ತು ಪಿತೃಪಕ್ಷದಲ್ಲಿ ಮಾಡುವ ಶ್ರಾದ್ಧವು ಸಮಷ್ಟಿ ಸ್ತರದಲ್ಲಿ ಪಿತೃಗಳ ಋಣವನ್ನು ತೀರಿಸುವ ಸಮಷ್ಟಿ ಉಪಾಸನೆಯಾಗಿದೆ. ವ್ಯಷ್ಟಿ ಋಣವು ಆಯಾ ಲಿಂಗದೇಹಗಳ ಬಗೆಗಿನ ಪ್ರತ್ಯಕ್ಷ ಕರ್ತವ್ಯ ಪಾಲನೆಯನ್ನು ಕಲಿಸಿದರೆ ಸಮಷ್ಟಿ ಋಣವು ಒಂದೇ ಕಾಲದಲ್ಲಿ ವ್ಯಾಪಕ ಮಟ್ಟದಲ್ಲಿ ಕೊಡುಕೊಳ್ಳುವ ಲೆಕ್ಕವನ್ನು ತೀರಿಸುತ್ತದೆ.
ನಮ್ಮೊಂದಿಗೆ ಅತಿಹೆಚ್ಚು ಸಂಬಂಧವಿರುವ ಮೊದಲಿನ ಒಂದೆರಡು ಪೀಳಿಗೆಗಳ ಪಿತೃಗಳ ಶ್ರಾದ್ಧವನ್ನು ನಾವು ಮಾಡುತ್ತೇವೆ. ಏಕೆಂದರೆ ಇವರೊಂದಿಗೆ ನಮ್ಮ ಕೊಡುಕೊಳ್ಳುವಿಕೆಯ ಲೆಕ್ಕಾಚಾರವು ಬಹಳಷ್ಟು ಇರುತ್ತದೆ. ಇತರ ಪೀಳಿಗೆಗಳಿಗಿಂತ ಈ ಪಿತೃಗಳಲ್ಲಿ ಕುಟುಂಬದಲ್ಲಿ ಸಿಲುಕಿಕೊಳ್ಳುವ ಆಸಕ್ತಿಯ ಪ್ರಮಾಣವು ಹೆಚ್ಚಿಗೆ ಇರುವುದರಿಂದ ಅವರ ಈ ಬಂಧನವು ತೀವ್ರವಾಗಿರುತ್ತದೆ. ಆದುದರಿಂದ ಈ ಬಂಧನವನ್ನು ಕಡಿದು ಹಾಕಲು ವೈಯಕ್ತಿಕ ರೀತಿಯಲ್ಲಿ ಒಂದು ವರ್ಷದವರೆಗೆ ಮಾಡುವ ಶ್ರಾದ್ಧಕ್ಕೆ ಸಂಬಂಧಿಸಿದ ವಿಧಿಗಳನ್ನು ಮಾಡುವುದು ಆವಶ್ಯಕವಾಗಿರುತ್ತದೆ. ಇದರ ತುಲನೆಯಲ್ಲಿ ಅದಕ್ಕೂ ಮೊದಲಿನ ಇತರ ಪಿತೃಗಳೊಂದಿಗಿನ ನಮ್ಮ ಸಂಬಂಧದ ತೀವ್ರತೆಯು ಕಡಿಮೆ ಇರುವುದರಿಂದ ಅವರಿಗೆ ವಿಧಿಯನ್ನು ಸಾಮೂಹಿಕವಾಗಿ ಪಿತೃಪಕ್ಷದಲ್ಲಿ ಮಾಡುವುದು ಸೂಕ್ತವಾಗಿದೆ. ಆದುದರಿಂದ ಒಂದು ವರ್ಷದವರೆಗೆ ಮಾಡುವ ಶ್ರಾದ್ಧ ಮತ್ತು ಪಿತೃಪಕ್ಷದಲ್ಲಿ ಮಾಡುವ ಶ್ರಾದ್ಧ ಇವರೆಡನ್ನೂ ಮಾಡುವುದು ಆವಶ್ಯಕವಾಗಿದೆ.
- ಓರ್ವ ವಿದ್ವಾಂಸ (ಸೌ.ಅಂಜಲಿ ಗಾಡಗೀಳರ ಮಾಧ್ಯಮದಿಂದ, ೧೨.೧೧.೨೦೦೫, ಮಧ್ಯಾಹ್ನ ೪.೦೯)

(ಆಧಾರ : ಸನಾತನ ಸಂಸ್ಥೆಯು ಮುದ್ರಿಸಿದ ಗ್ರಂಥ ‘ಶ್ರಾದ್ಧ - ೨ ಭಾಗಗಳು’)

ಸಂಬಂಧಿಸಿದ ವಿಷಯಗಳು
ಶ್ರೀ ಗುರುದೇವ ದತ್ತ : ಅತೃಪ್ತ ಪೂರ್ವಜರ ತೊಂದರೆಗಳಿಂದ ರಕ್ಷಿಸುವ ದೇವತೆ
ಶ್ರಾದ್ಧವನ್ನು ಮಾಡುವುದರ ಮಹತ್ವ
ಶ್ರಾದ್ಧವನ್ನು ಯಾವಾಗ ಮಾಡಬೇಕು?
ಶ್ರಾದ್ಧವನ್ನು ಮಾಡಿದ ನಂತರ ಪಿತೃಗಳಿಗೆ ಸದ್ಗತಿ ದೊರಕುವ ಪ್ರಕ್ರಿಯೆ
ಶ್ರಾದ್ಧದಿಂದ ‘೧೦೧ ಕುಲಗಳಿಗೆ ಗತಿ ಸಿಗುತ್ತದೆ’ ಎಂದು ಹೇಳುತ್ತಾರೆ ಇದರ ಅರ್ಥವೇನು?
ಶ್ರಾದ್ಧದಲ್ಲಿ ಪಿತೃಗಳಿಗೆ ನೀಡಿದ ಅನ್ನವು ಅವರಿಗೆ ಹೇಗೆ ತಲುಪುತ್ತದೆ?
ಶ್ರಾದ್ಧಕರ್ಮವನ್ನು ಮಾಡುವಾಗ ಕೇವಲ ಪಿತೃಗಳ ಹೆಸರು ಮತ್ತು ಅವರ ಗೋತ್ರವನ್ನು ಹೇಳುವುದರಿಂದ ಅವರಿಗೆ ಶ್ರಾದ್ಧದ ಹವ್ಯವು (ಆಹಾರ) ಹೇಗೆ ಸಿಗುತ್ತದೆ?
ನಾರಾಯಣಬಲಿ, ನಾಗಬಲಿ ಮತ್ತು ತ್ರಿಪಿಂಡಿ ಶ್ರಾದ್ಧವಿಧಿಗಳ ಬಗ್ಗೆ ಮಹತ್ವದ ಸೂಚನೆಗಳು
ನಾರಾಯಣಬಲಿ ಮತ್ತು ನಾಗಬಲಿ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ
ತ್ರಿಪಿಂಡಿ ಶ್ರಾದ್ಧ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ
ಮೃತ ವ್ಯಕ್ತಿಯ ಬಾಯಿಯಲ್ಲಿ ಗಂಗಾಜಲವನ್ನು ಹಾಕಿ, ತುಳಸಿ ಎಲೆಯನ್ನು ಏಕೆ ಇಡುತ್ತಾರೆ?
ಮೃತದೇಹವನ್ನು ಮನೆಯಲ್ಲಿಡುವಾಗ ಕಾಲುಗಳನ್ನು ದಕ್ಷಿಣ ದಿಕ್ಕಿಗೆ ಏಕೆ ಮಾಡುತ್ತಾರೆ?
ಅಸ್ಥಿಸಂಚಯ ಮತ್ತು ಅಸ್ಥಿವಿಸರ್ಜನೆ
Dharma Granth

No comments:

Post a Comment

Note: only a member of this blog may post a comment.